ADVERTISEMENT

ನ್ಯಾಯಾಂಗದಲ್ಲಿ ‘ಎಐ’ ಅಳವಡಿಕೆಗೆ ಕ್ರಮ: ಎಚ್‌.ಕೆ.ಪಾಟೀಲ

ಕಾನೂನು ವಿ.ವಿ. ಘಟಿಕೋತ್ಸವ * ಕಾರ್ಯಕ್ಷಮತೆ ವೃದ್ಧಿಗೆ ಒತ್ತು– ಎಚ್‌.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 20:53 IST
Last Updated 5 ನವೆಂಬರ್ 2025, 20:53 IST
<div class="paragraphs"><p>ಧಾರವಾಡದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾಯಮೂರ್ತಿ ಎಸ್‌.ಅಬ್ದುಲ್‌ ನಜೀರ್‌ ಹಾಗೂ ಬೆಂಗಳೂರಿನ ಹಿರಿಯ ವಕೀಲ ವಿ.ಸುದೇಶ ಪೈ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದರು. </p></div>

ಧಾರವಾಡದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾಯಮೂರ್ತಿ ಎಸ್‌.ಅಬ್ದುಲ್‌ ನಜೀರ್‌ ಹಾಗೂ ಬೆಂಗಳೂರಿನ ಹಿರಿಯ ವಕೀಲ ವಿ.ಸುದೇಶ ಪೈ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದರು.

   

ಧಾರವಾಡ: ‘ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಸಲಾಗುವುದು. ನ್ಯಾಯಾಂಗದ ಕಾರ್ಯಕ್ಷಮತೆಯನ್ನು ವೃದ್ಧಿಸಲು ಕ್ರಮವಹಿಸಲಾಗುವುದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.

ADVERTISEMENT

‘ಎಐ ತಂತ್ರಜ್ಞಾನ ಅಳವಡಿಕೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳುತ್ತೇವೆ. ಅದನ್ನು ವ್ಯವಸ್ಥಿತವಾಗಿ ಅಳವಡಿಸುತ್ತೇವೆ’ ಎಂದು ಹೇಳಿದರು.

‘ಕಾನೂನು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಉತ್ತರ ಕರ್ನಾಟಕ ವಕೀಲರ ತರಬೇತಿ ಅಕಾಡೆಮಿಗಳು ‌ಕಾನೂನು ಶಿಕ್ಷಣ ಅಭಿವೃದ್ಧಿ ಮತ್ತು ಕಿರಿಯ ವಕೀಲರ ಪ್ರಗತಿಗೆ ಸಹಕಾರಿಯಾಗಿವೆ’ ಎಂದು ಹೇಳಿದರು.

ರಾಜ್ಯ ಗಡಿ ಮತ್ತು ನದಿ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಮಾತನಾಡಿ, ‘ತ್ವರಿತ ನ್ಯಾಯ ವ್ಯವಸ್ಥೆಗೆ ‘ಎಐ’ ತಂತ್ರಜ್ಞಾನ ಸುದ್ದಿ ‘ಪ್ರಜಾವಾಣಿ’ಯಲ್ಲಿ ಓದಿದೆ. ಸರ್ಕಾರ ‘ಎಐ ಸಂಯೋಜನೆ’ ಸಂಬಂಧಿಸಿದಂತೆ ಕಾಯ್ದೆ ರೂಪಿಸಲು ಮುಂದಾಗಿರುವುದು ಒಳ್ಳೆಯ ನಿರ್ಧಾರ’ ಎಂದು ಹೇಳಿದರು.

‘ಕೋರ್ಟ್‌ಗಳಲ್ಲಿ ಬಹಳಷ್ಟು ಪ್ರಕರಣಗಳು ದೀರ್ಘಕಾಲದಿಂದ ಬಾಕಿ ಇವೆ. ಎಐ ಅಳವಡಿಕೆಯಿಂದ ‌ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.