
ಕಲಘಟಗಿ: ಪಟ್ಟಣದ ತಾಲ್ಲೂಕು ಪಂಚಾಯಿತಿಯ ಮಳಿಗೆಯಲ್ಲಿ ಆರಂಭವಾದ ಅಕ್ಕ ಕೆಫೆ ಉಪಾಹಾರ ಗೃಹವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳವಾರ ಉದ್ಘಾಟಿಸಿದರು.
ನಂತರ ಮಾತನಾಡಿ, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರು ಸಾವಲಂಬಿ ಬದುಕು ಕಟ್ಟಿಕೊಳ್ಳಲು ಅಕ್ಕ ಕೆಫೆಗಳನ್ನು ಆರಂಭಿಸಲಾಗಿದೆ ಎಂದರು.
ಅಕ್ಕ ಕೆಫೆ ಮಹಿಳೆಯರಿಂದಲೇ ನಡೆಯುತ್ತದೆ. ಇಲ್ಲಿ ಶುಚಿ, ರುಚಿಯಾದ ಆಹಾರ ಸಿಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ವಿತರಣೆ: ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಟಿ.ವಿ ಹಾಗೂ ಮಕ್ಕಳ ಆಟಿಗೆ ಸಾಮಗ್ರಿಗಳ ಕಿಟ್ ಅನ್ನು ಸಚಿವರು ವಿತರಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ತಾ.ಪಂ ಇಒ ಪರಶುರಾಮ ಸಾವಂತ, ತಹಶೀಲ್ದಾರ್ ಬಸವರಾಜ ಹೊಂಕಣದವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.