ಧಾರವಾಡ: ‘ಕರ್ನಾಟಕ ವಿದ್ಯಾವರ್ಧಕ ಸಂಘದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ತರಲು ಅಧ್ಯಕ್ಷ ಚಂದ್ರಕಾಂತ ಬೆಲ್ಲದ ವಿಫಲರಾಗಿದ್ದಾರೆ’ ಎಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಆರೋಪಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ವಿದ್ಯಾವರ್ಧಕ ಸಂಘವು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸಂಸ್ಥೆ. ಸಂಘಕ್ಕೆ ಸಾಹಿತಿಯೇ ಅಧ್ಯಕ್ಷರಾಗಬೇಕು. ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿರುವ ನಾಮಪತ್ರವನ್ನು ಬೆಲ್ಲದ ಅವರು ಹಿಂಪಡೆಯಬೇಕು. ಸಾಹಿತಿಗಳಿಗೆ ಅವಕಾಶ ಕಲ್ಪಿಸಬೇಕು. ಬೆಲ್ಲದ ಅವರು ನಾಮಪತ್ರ ಹಿಂಪಡೆದರೆ ನಾನೂ ನಾಮಪತ್ರ ವಾಪಸ್ ಪಡೆಯುತ್ತೇನೆ’ ಎಂದರು.
‘ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ಧಾರೆ. ಸಂಘವು ರಾಜಕೀಯ ಸಂಸ್ಥೆಯಾಗುತ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದವರು ಕಣಕ್ಕಿಳಿಯಲು ಮುಂದಾಗಿರುವುದು ಖಂಡನೀಯ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು’ ಎಂದು ಹೇಳಿದರು.
ಪ್ರಕಾಶಗೌಡ ಹುಚ್ಚನಗೌಡರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.