
ಪ್ರಜಾವಾಣಿ ವಾರ್ತೆ
ಬಂಧನ
ಅಳ್ನಾವರ: ಪಟ್ಟಣಕ್ಕೆ ಹೊಂದಿಕೊಂಡಿರುವ ರಾಜ್ಯ ಹೆದ್ದಾರಿಯ ಡೌಗಿ ಹಳ್ಳ ಸೇತುವೆಯ ಬಳಿ ಕಾಡು ಹಂದಿಯನ್ನು ಬೇಟೆಯಾಡಿ, ಮಾಂಸವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.
ಇಲ್ಲಿನ ಸಂಜು ಈಶಂತ ರೊಡ್ರಿಗ್ಸ್ ಬಂಧಿತ ಆರೋಪಿ. ಆತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಧಾರವಾಡ ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖ್ ಅಬ್ದುಲ್ ಅಲೀಮ್ ಸಿದ್ಧಿಕಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ.ಎಚ್., ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಶಕುಂತಲಾ, ಅಳ್ನಾವರ ಉಪ ವಲಯ ಅರಣ್ಯಾಧಿಕಾರಿ ಯಲ್ಲನಾಯ್ಕ ಹಮಾಣಿ, ಅರಣ್ಯ ಪಾಲಕರಾದ ಮಾರುತಿ ಎಣ್ಣಿ, ಸಂಗಣ್ಣ ಬಿರಾದಾರ, ಗುರುರಾಜ ಎಚ್., ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.