ADVERTISEMENT

ಅಂಬೇಡ್ಕರ್ ಆದರ್ಶ ಅಳವಡಿಸಿಕೊಳ್ಳಲು ಸಲಹೆ: ಸಿ.ಎಂ ನಿಂಬಣ್ಣವರ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 2:42 IST
Last Updated 15 ಏಪ್ರಿಲ್ 2022, 2:42 IST
ಕಲಘಟಗಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡ ಡಾ.ಬಿ.ಆರ್ ಅಂಬೇಡ್ಕರ್ 131ನೇ ಜಯಂತಿ ಕಾರ್ಯಕ್ರಮವನ್ನು ಶಾಸಕ ಸಿ. ಎಂ ನಿಂಬಣ್ಣವರ ಉದ್ಘಾಟಿಸಿದರು
ಕಲಘಟಗಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡ ಡಾ.ಬಿ.ಆರ್ ಅಂಬೇಡ್ಕರ್ 131ನೇ ಜಯಂತಿ ಕಾರ್ಯಕ್ರಮವನ್ನು ಶಾಸಕ ಸಿ. ಎಂ ನಿಂಬಣ್ಣವರ ಉದ್ಘಾಟಿಸಿದರು   

ಕಲಘಟಗಿ: ಅಂಬೇಡ್ಕರ್ ಅವರ ತತ್ವ ಆದರ್ಶ ಇಂದಿನ ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಸಿ.ಎಂ ನಿಂಬಣ್ಣವರ ಹೇಳಿದರು.

ಪಟ್ಟಣದ ಶಾಸಕರ ಮಾದರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ ‘ಅಂಬೇಡ್ಕರ್ ದಿನದಲಿತರ ಆಶಾಕಿರಣವಾಗಿದ್ದರು’ ಎಂದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲಿಕಾರ್ಜುನ ಪುರದನಗೌಡರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ.ಜೆ ಯೋಗಪ್ಪನವರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಪುತ್ರ ಮಠಪತಿ, ಪ.ಪಂ ಮುಖ್ಯಾಧಿಕಾರಿ ವೈ.ಜಿ ಗದ್ದಿಗೌಡರ, ಸಿಪಿಐ ಪ್ರಭು ಸೂರಿನ, ಬಸವರಾಜ ಕಟ್ಟೀಮನಿ, ಪಕ್ಕೀರಗೌಡ ದೊಡ್ಡಮನಿ, ರಮೇಶ ಸೋಲಾರಗೋಪ್ಪ, ಚಂದ್ರು ನಡುವಿನಮನಿ, ಶರೀಪ ಹರಿಜನ, ಶಶಿಕುಮಾರ ಕಟ್ಟಿಮನಿ, ಬಸವರಾಜ ಮಾದರ, ಮಂಜುನಾಥ ಮಾದರ, ಅಜಾದ ಮಲ್ಲಿಕನವರ ಇದ್ದರು.

ADVERTISEMENT

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ಪಂಗಡದ ಮತ್ತು ಇತರೆ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.