pic
ನವಲಗುಂದ: ನಗರದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡದೇ ಅವಮಾನಿಸಿದ್ದಾರೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ನವಲಗುಂದ ನಗರ ಘಟಕದಿಂದ ಗ್ರಂಥಾಲಯದ ಮುಂದೆ ಪ್ರತಿಭಟನೆ ನಡೆಸಿದರು.
ಸೋಮವಾರ ದೇಶದಲ್ಲೆಡೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಆದರೆ ನವಲಗುಂದ ನಗರದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿಅಂಬೇಡ್ಕರ್ ಜಯಂತಿ ಆಚರಣೆ ಮಾಡದೇ ಅಗೌರವ ತೋರಿ ಅವಮಾನಿಸಲಾಗಿದೆ ಎಂದು ಪ್ರತಿಭಟನಾಕಾರರು ತಹಶೀಲ್ದಾರ್ ಎದುರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಈ ಗ್ರಂಥಾಲಯದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವದು ಎಚ್ಚರಿಸಿದರು. ನಂತರ ತಹಶೀಲ್ದಾರ್ ಸುಧೀರ ಸಾಹುಕಾರ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವ ಭರವಸೆ ನಂತರ ಪ್ರತಿಭಟನೆ ಹಿಂಪಡೆದರು.
ಅಧ್ಯಕ್ಷ ಶರಣಪ್ಪ ದೊಡಮನಿ, ಜಗದೀಶ ಕಾಡಮ್ಮನವರ, ಈರಣ್ಣ ಶಿಡಗಂಟಿ, ರಾಜು ನಡುವಿನಮನಿ, ಬಸವರಾಜ ಮುಧೋಳ, ನಿಂಗಪ್ಪ ಕೆಳಗೇರಿ, ಹನುಮಂತ ಹುಳಕನ್ನವ್ವರ, ಬಿ.ಜಿ.ಮಲ್ಲದಾಸರ, ಬಿ.ಎ.ಗುತ್ತೇಪ್ಪನವರ, ಎ.ಜಿ.ಇಚ್ಚಂಗಿ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.