ADVERTISEMENT

ಧಾರವಾಡ | ಅಂಬೇಡ್ಕರ್ ಪ್ರತಿಮೆ ಮರುಸ್ಥಾಪನೆಗೆ ಆಗ್ರಹ 

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 3:07 IST
Last Updated 23 ಸೆಪ್ಟೆಂಬರ್ 2025, 3:07 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಸಮತಾ ಸೇನಾ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಸಮತಾ ಸೇನಾ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು   

ಧಾರವಾಡ: ತಾಲ್ಲೂಕಿನ ಗರಗ ಗ್ರಾಮದ ಭೋವಿ ಓಣಿಯಲ್ಲಿ ಸ್ಥಾಪಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತೆರವುಗೊಳಿಸಿ ಅವಮಾನ ಎಸಗಲಾಗಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ವಡ್ಡರ ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಹಾಗೂ ಸಮತಾ ಸೇನಾ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.‌

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಘೋಷಣೆ ಕೂಗಿದರು.

ಅಂಬೇಡ್ಕರ್ ಅವರ ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಮೂರು ದಿನಗಳ ಒಳಗೆ ಪ್ರತಿಮೆಯನ್ನು ಆ ಜಾಗದಲ್ಲಿ ಮರುಸ್ಥಾಪನೆ ಮಾಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಗುರುನಾಥ ಉಳ್ಳಿಕಾಶಿ, ಮಂಜನಾಥ ಹಿರೇಮಠ, ವೆಂಕಟೇಶ ಮೇಸ್ತ್ರಿ, ಹರೀಶ ಪೂಜಾರ, ಪ್ರಕಾಶ ಪೂಜಾರ, ಮಂಜು ಮುಗದ, ರಾಯಣ್ಣ ವಡ್ಡರ, ನಿಂಗಪ್ಪ ವಡ್ಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.