
ಪ್ರಜಾವಾಣಿ ವಾರ್ತೆ
ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯ
ಧಾರವಾಡ: ಡಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಸಾಹಿತಿ ವೀಣಾ ಶಾಂತೇಶ್ವರ ಹಾಗೂ ಸಾಹಿತಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಿ.ಎಂ. ಪಾಟೀಲ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುರಸ್ಕಾರವು ತಲಾ ₹50 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಜ.31ರಂದು ನಗರದ ಬೇಂದ್ರೆ ಭವನದಲ್ಲಿ ನಡೆಯುವ ಬೇಂದ್ರೆ ಜನ್ಮದಿನದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.