ADVERTISEMENT

ದೆಹಲಿಗೆ ಹಿಂದಿರುಗಿದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 4:49 IST
Last Updated 19 ಜನವರಿ 2020, 4:49 IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್‌ ಪೊಲಿಯೊ ಲಸಿಕೆ ಹಾಕಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್‌ ಪೊಲಿಯೊ ಲಸಿಕೆ ಹಾಕಿದರು.   

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸದ ಪ್ರಹ್ಲಾದ ಜೋಶಿ ಅವರ ಮನೆಯಲ್ಲಿ ಮಗುವಿಗೆ ಪಲ್ಸ್‌ ಪೊಲೀಯೊ ಲಸಿಕೆ ಹಾಕಿದರು.

ಜೋಶಿ ಅವರ ಮನೆಯಲ್ಲಿಯೇ ಉಪಾಹಾರ ಸೇವಿಸಿ, ಕಾರ್ಯಕರ್ತರೊಂದಿಗೆ ಕೆಲ ಸಮಯ ಮಾತನಾಡಿದರು. ನಂತರ ವಾಯುಮಾರ್ಗವಾಗಿ ದೆಹಲಿಗೆ ಹಿಂದಿರುಗಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ADVERTISEMENT

ಹುಬ್ಬಳ್ಳಿಯಲ್ಲಿ ಶನಿವಾರ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಜನಜಾಗೃತಿ ಮೂಡಿಸಲೆಂದು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಅವರು ಭಾಷಣ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.