ADVERTISEMENT

ಹುಬ್ಬಳ್ಳಿ: ಕೋವಿಡ್–19- ಆನಂದನಗರ ಪ್ರೌಢಶಾಲೆ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 16:52 IST
Last Updated 22 ಜನವರಿ 2022, 16:52 IST
ಹುಬ್ಬಳ್ಳಿ ಆನಂದನಗರ ಸರ್ಕಾರಿ ಪ್ರೌಢಶಾಲೆಯನ್ನು ಸ್ಥಳೀಯ ಪಾಲಿಕೆ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಸೀಲ್‌ಡೌನ್ ಮಾಡಿದರು
ಹುಬ್ಬಳ್ಳಿ ಆನಂದನಗರ ಸರ್ಕಾರಿ ಪ್ರೌಢಶಾಲೆಯನ್ನು ಸ್ಥಳೀಯ ಪಾಲಿಕೆ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಸೀಲ್‌ಡೌನ್ ಮಾಡಿದರು   

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಆನಂದನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೋವಿಡ್–19 ದೃಢಪಟ್ಟಿರುವುದರಿಂದ ಶಾಲೆಯನ್ನು ಶನಿವಾರ ಸೀಲ್‌ಡೌನ್ ಮಾಡಲಾಯಿತು.

ಶಾಲೆಯಲ್ಲಿ ಇತ್ತೀಚೆಗೆ ಕೋವಿಡ್ ತಪಾಸಣೆ ನಡೆದಿತ್ತು. ಇಂದು ವರದಿ ಬಂದ ವರದಿಯಲ್ಲಿ ಇಬ್ಬರು ಶಿಕ್ಷಕರು ಹಾಗೂ 12 ವಿದ್ಯಾರ್ಥಿಗಳು ಸೋಂಕು ಇರುವುದು ದೃಢಪಟ್ಟಿದೆ.

ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಸ್ಥಳೀಯ ಆರೋಗ್ಯ ಸಿಬ್ಬಂದಿಯೊಂದಿಗೆ ಶಾಲೆಗೆ ತೆರಳಿ, ಐದು ದಿನಗಳವರೆಗೆ ಸೀಲ್‌ಡೌನ್ ಮಾಡಲಾಯಿತು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.