ADVERTISEMENT

ವೇತನ ಹೆಚ್ಚಳಕ್ಕೆ ಆಗ್ರಹ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2018, 12:20 IST
Last Updated 7 ಜುಲೈ 2018, 12:20 IST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು  ಹಾಗೂ ಸಹಾಯಕರು ಹುಬ್ಬಳ್ಳಿ ತಾಲ್ಲೂಕು ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು  ಹಾಗೂ ಸಹಾಯಕರು ಹುಬ್ಬಳ್ಳಿ ತಾಲ್ಲೂಕು ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟದ ಹುಬ್ಬಳ್ಳಿ ಗ್ರಾಮೀಣ ಸಮಿತಿ ತಾಲ್ಲೂಕು ಕಚೇರಿ ಎದುರು ಶನಿವಾರ ಪ್ರಭಟನೆ ನಡೆಸಿತು.

ಕಡಿಮೆ ಸಂಬಳ ನೀಡುತ್ತಿರುವುದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಘೋಷಣೆ ಮಾಡಿರುವಂತೆ ಕನಿಷ್ಠ ₹18,000 ವೇತನ ನಿಗದಿ ಮಾಡಬೇಕು. ಇಲಾಖೆಯ ಸಿಬ್ಬಂದಿ ಎಂದು ಪರಿಗಣಿಸಬೇಕು. ಪ್ಯಾಕೇಜ್ ಪದ್ಧತಿಯಲ್ಲಿ ಆಹಾರ ವಿತರಣೆ ಹಾಗೂ ನಗದ ವರ್ಗಾವಣೆ ಪ್ರಸ್ತಾವವನ್ನು ಕೈಬಿಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಫಲಾನುಭವಿಗಳಿಗೆ ಆಧಾರ್ ಕಾರ್ಡ್‌ ಕಡ್ಡಾಯಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬೇಡಿಕೆ ಈಡೇರುವ ವರೆಗೂ ಹೋರಾಟ ನಿಲ್ಲದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.