
ಪ್ರಜಾವಾಣಿ ವಾರ್ತೆ
ಗಿರೀಶ ಸಾವಂತ, ಅಂಜಲಿ ಅಂಬಿಗೇರ
ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಅವರನ್ನು ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತನನ್ನು ಎಂಟು ದಿನ ಸಿಐಡಿ ವಶಕ್ಕೆ ನೀಡಿ, ಜೆಎಂಎಫ್‌ಸಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಆರೋಪಿಯನ್ನು ಬುಧವಾರ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು, ಸುದೀರ್ಘ ವಿಚಾರಣೆ ನಡೆಸಿದ್ದರು. ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, 15 ದಿನ ತಮ್ಮ ವಶಕ್ಕೆ ನೀಡಲು ಕೋರಿದ್ದರು.
ಈವರೆಗೆ ಪ್ರಕರಣದ ವಿಚಾರಣೆ ನಡೆಸಿರುವ ಅಧಿಕಾರಿಗಳು, ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಅಗತ್ಯ ದಾಖಲೆಪತ್ರ ಪಡೆದು, ತನಿಖೆ ಇನ್ನಷ್ಟು ಚುರುಕುಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.