ADVERTISEMENT

ನವಲಗುಂದ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ತೀವ್ರ ಕುತೂಹಲ ಕೆರಳಿಸಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

​ಪ್ರಜಾವಾಣಿ ವಾರ್ತೆ
Published 7 ಮೇ 2022, 3:45 IST
Last Updated 7 ಮೇ 2022, 3:45 IST
ನೂತನ ಅಧ್ಯಕ್ಷ ಅಪ್ಪಣ್ಣ ಹಳ್ಳದ ಮತ್ತು ಉಪಾಧ್ಯಕ್ಷ ಪದ್ಮಾವತಿ ಶಂಕ್ರಪ್ಪ ಪೂಜಾರ ಅವರನ್ನು ಕಾಂಗ್ರೆಸ್ ಮುಖಂಡ ಎನ್‌.ಎಚ್‌. ಕೋನರಡ್ಡಿ ಅಭಿನಂದಿಸಿದರು. ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನೋದ ಅಸೂಟಿ ಇದ್ದಾರೆ
ನೂತನ ಅಧ್ಯಕ್ಷ ಅಪ್ಪಣ್ಣ ಹಳ್ಳದ ಮತ್ತು ಉಪಾಧ್ಯಕ್ಷ ಪದ್ಮಾವತಿ ಶಂಕ್ರಪ್ಪ ಪೂಜಾರ ಅವರನ್ನು ಕಾಂಗ್ರೆಸ್ ಮುಖಂಡ ಎನ್‌.ಎಚ್‌. ಕೋನರಡ್ಡಿ ಅಭಿನಂದಿಸಿದರು. ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನೋದ ಅಸೂಟಿ ಇದ್ದಾರೆ   

ನವಲಗುಂದ: ತೀವ್ರ ಕುತೂಹಲ ಕೆರಳಿಸಿದ್ದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅಧ್ಯಕ್ಷರಾಗಿ ಅಪ್ಪಣ್ಣ ಬಾಗಪ್ಪ ಹಳ್ಳದ ಮತ್ತು ಉಪಾಧ್ಯಕ್ಷರಾಗಿ ಪದ್ಮಾವತಿ ಶಂಕ್ರಪ್ಪ ಪೂಜಾರ ಶುಕ್ರವಾರ ಆಯ್ಕೆಯಾದರು.

ಪುರಸಭೆಯ 23 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. 9 ಜೆಡಿಎಸ್ ಹಾಗೂ ಒಬ್ಬರು ಪಕ್ಷೇತರರು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ, ಕಾಂಗ್ರೆಸ್ ಬಹುಮತ ಪಡೆದಿತ್ತು. ಆದರೆ, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿಯೇ ತೀವ್ರ ಪೈಪೋಟಿ ಇದ್ದ ಕಾರಣ ಕೆಲವು ಗುಂಪುಗಳು ಸೃಷ್ಟಿಯಾಗಿದ್ದವು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ತಲಾ 13 ಮತ ಪಡೆದರು. ನಾಲ್ವರು ಗೈರಾಗಿದ್ದರು. ಬಿಜೆಪಿಯ 6 ಸದಸ್ಯರು ಇದ್ದಾರೆ.

ADVERTISEMENT

ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ ಮಾತನಾಡಿ, ಇದು ಒಗ್ಗಟ್ಟಿನಿಂದ ಪಡೆದ ಗೆಲವು. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ನೂತನವಾಗಿ ಆಯ್ಕಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು
ಹೇಳಿದರು.

ಕಾರ್ಯಕರ್ತರು ಬಣ್ಣ ಎರಚುವ ಮೂಲಕ ಕುಣಿದು, ಕುಪ್ಪಳಿಸಿ ಡೊಳ್ಳು ಬಾರಿಸುತ್ತಾ ಜೈಕಾರ ಕೂಗಿ ಸಂತೋಷ ವ್ಯಕ್ತಪಡಿಸಿದರು. ತಹಶೀಲ್ದಾರ್‌ ಅನಿಲ ಬಡಿಗೇರ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.