ADVERTISEMENT

ಬೆಂಗಳೂರು–ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ: ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2025, 15:48 IST
Last Updated 23 ಮಾರ್ಚ್ 2025, 15:48 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ‘ಬೆಂಗಳೂರು–ಹುಬ್ಬಳ್ಳಿ ನಡುವೆ ಮಾರ್ಚ್ 30ರಿಂದ ಇಂಡಿಗೊ ಸಂಸ್ಥೆಯ ವಿಮಾನ ಹಾರಾಟ ಆರಂಭವಾಗಲಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಹುಬ್ಬಳ್ಳಿಗೆ ದಿನಕ್ಕೆ ಮೂರು ವಿಮಾನಗಳು ಸಂಪರ್ಕ ಕಲ್ಪಿಸಲಿವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

‘ಬೆಳಿಗ್ಗೆ 9.55ಕ್ಕೆ ಬೆಂಗಳೂರಿನಿಂದ ಹೊರಡುವ ವಿಮಾನ 11.20ಕ್ಕೆ ಹುಬ್ಬಳ್ಳಿ ತಲುಪಲಿದೆ. ಬೆಳಿಗ್ಗೆ 11.55ಕ್ಕೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 1.20ಕ್ಕೆ ಮರಳಿ ಬೆಂಗಳೂರು ತಲುಪಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಇಂಡಿಗೊ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರ ಫಲವಾಗಿ ಈ ನಿರ್ಣಯ ಹೊರಬಿದ್ದಿದೆ. ಇದರಿಂದ ಹುಬ್ಬಳ್ಳಿ–ಧಾರವಾಡ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹುಬ್ಬಳ್ಳಿ ಮತ್ತು ಅಹಮದಾಬಾದ್ ನಡುವೆಯೂ ವಿಮಾನ ಸೇವೆ ಆರಂಭಿಸಲು ವಿನಂತಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.