ADVERTISEMENT

ಎಪಿಎಂಸಿ: 23ರಂದು ಸಭೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 15:35 IST
Last Updated 15 ಜುಲೈ 2021, 15:35 IST

ಹುಬ್ಬಳ್ಳಿ: ಅಮರಗೋಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಸದಸ್ಯರು ಅವಿಶ್ವಾಸ ಮಂಡನೆಗೆ ಕೋರಿರುವ ಹಿನ್ನೆಲೆಯಲ್ಲಿ ಆ ಸಭೆಯ ಅಧ್ಯಕ್ಷತೆ ಯಾರು ವಹಿಸಬೇಕು ಎನ್ನುವ ಗೊಂದಲ ನಿವಾರಣೆಯಾಗಿದ್ದು, ಜು. 23ರಂದು ಸಭೆ ಜರುಗಲಿದೆ.

ಅಮರಗೋಳದ ಎಪಿಎಂಸಿ ‘ಎ’ ದರ್ಜೆಯದಾಗಿದ್ದರಿಂದ ಅಧ್ಯಕ್ಷತೆಯ ಗೊಂದಲ ಉಂಟಗಿತ್ತು. ಸಮಸ್ಯೆ ನಿವಾರಿಸುವಂತೆ ಜಿಲ್ಲಾಧಿಕಾರಿಗೆ ಕೋರಲಾಗಿತ್ತು. ಜಿಲ್ಲಾಧಿಕಾರಿ ಎಪಿಎಂಸಿ ನಿರ್ದೇಶಕರಿಗೆ ಪತ್ರ ಬರೆದು ಮಾಹಿತಿ ಪಡೆದುಕೊಂಡರು. ಅಂತಿಮವಾಗಿ ಹುಬ್ಬಳ್ಳಿ ನಗರ ತಹಶೀಲ್ದಾರ್‌ ಸಭೆಯ ಅಧ್ಯಕ್ಷತೆ ವಹಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

‘ಹುಬ್ಬಳ್ಳಿ ನಗರ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಶುಕ್ರವಾರ ಈ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಗುವುದು’ ಎಂದು ಎ‍ಪಿಎಂಸಿ ಸಹಾಯಕ ಕಾರ್ಯದರ್ಶಿ ಎ.ಪಿ. ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಜೂನ್‌ 3ರಂದು ಎಪಿಎಂಸಿ ಅಧ್ಯಕ್ಷ ಸಹದೇವಪ್ಪ ಸುಡೇಕನವರ ವಿರುದ್ಧ 12 ಜನ ಸದಸ್ಯರು ಅವಿಶ್ವಾಸ ಮಂಡನೆಗೆ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.