ADVERTISEMENT

ಕ್ರಮ ಕೈಗೊಳ್ಳಲು ಮನವಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:05 IST
Last Updated 13 ಏಪ್ರಿಲ್ 2022, 4:05 IST
ಸಮಯಕ್ಕೆ ಸರಿಯಾಗಿ ಕೆಲಸ ಕೊಡುತ್ತಿಲ್ಲವೆಂದು ಆರೋಪಿಸಿ ಜಿಲ್ಲಾ ಕಾರ್ಮಿಕ ಸಂಘದ ವತಿಯಿಂದ ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಅಜೇಯ.ಎನ್ ಅವರಿಗೆ ಕುಂದಗೋಳದಲ್ಲಿ ಮನವಿ ಸಲ್ಲಿಸಲಾಯಿತು
ಸಮಯಕ್ಕೆ ಸರಿಯಾಗಿ ಕೆಲಸ ಕೊಡುತ್ತಿಲ್ಲವೆಂದು ಆರೋಪಿಸಿ ಜಿಲ್ಲಾ ಕಾರ್ಮಿಕ ಸಂಘದ ವತಿಯಿಂದ ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಅಜೇಯ.ಎನ್ ಅವರಿಗೆ ಕುಂದಗೋಳದಲ್ಲಿ ಮನವಿ ಸಲ್ಲಿಸಲಾಯಿತು   

ಕುಂದಗೋಳ: ನರೇಗಾ ಯೋಜನೆಯಡಿ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದರೂ, ಸರಿಯಾದ ಸಮಯಕ್ಕೆ ಕೆಲಸ ಕೊಡದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾರ್ಮಿಕ ಸಂಘದ ಸದಸ್ಯೆ ನಿಂಗಮ್ಮ ಸವಣೂರ ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಅಜೇಯ.ಎನ್ ಅವರಿಗೆ ದೂರು ನೀಡಿದ್ದಾರೆ.

ತಾಲ್ಲೂಕಿನ ವಿವಿಧ ಗ್ರಾಮಗಳ ಕೂಲಿಕಾರ್ಮಿಕರೂಂದಿಗೆ ತಾಲ್ಲೂಕು ಪಂಚಾಯ್ತಿ ಕಚೇರಿಗೆ ಬಂದ ಅವರು ‘ನಿರುದ್ಯೋಗ ಭತ್ಯೆ ನೀಡಲು ಆದೇಶವಿದ್ದರೂ ಕಳಸ, ಸಂಶಿ, ನೆರ್ತಿ, ಕಮಡೊಳ್ಳಿ ಗುಡಗೇರಿ, ತರ್ಲಘಟ್ಟ, ಹಿರೇಗುಂಜಳ, ಪಶುಪತಿಹಾಳ, ರೊಟ್ಟಿಗವಾಡ, ಹಿರೇಬೂದಿಹಾಳ ಹಾಗೂ ದ್ಯಾವನೂರು ಪಂಚಾಯ್ತಿ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ತಾಲ್ಲೂಕು ಅಧಿಕಾರಿಗಳು ಗಮನಹರಿಸಿ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದರೆ ಏ. 25ರಿಂದ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT