ADVERTISEMENT

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 5:54 IST
Last Updated 12 ಆಗಸ್ಟ್ 2022, 5:54 IST
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸುವಂತೆ ರಾಣಿ ಚನ್ನಮ್ಮ ಗಜಾನನ ಉತ್ಸವ ಸಮಿತಿ ವತಿಯಿಂದ ಗುರುವಾರ ಪಾಲಿಕೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸುವಂತೆ ರಾಣಿ ಚನ್ನಮ್ಮ ಗಜಾನನ ಉತ್ಸವ ಸಮಿತಿ ವತಿಯಿಂದ ಗುರುವಾರ ಪಾಲಿಕೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು   

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಬೇಕು ಎಂದು ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ಗುರುವಾರ ಪಾಲಿಕೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಬೇಕು ಎಂದು ಸಮಿತಿಯ ಸಂಚಾಲಕ ಹನುಮಂತಸಾ ನಿರಂಜನ ಮನವಿ ಮಾಡಿದರು.

ಹನುಮಂತಸಾ ನಿರಂಜನ ಮಾತನಾಡಿ, ‘ಈದ್ಗಾ ಮೈದಾನವು ಪಾಲಿಕೆಯ ಆಸ್ತಿಯಾಗಿದ್ದು, ಇಲ್ಲಿ ಎಲ್ಲ ಸಮುದಾಯದವರು ಸಾಂಸ್ಕೃತಿ ಆಚರಣೆಗಳನ್ನು ಮಾಡಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ಈಗಾಗಲೇ ನ್ಯಾಯಾಲಯವು ನಿರ್ದೇಶನ ನೀಡಿದೆ. ಎಲ್ಲರೂ ಸೌಹಾರ್ದದಿಂದ ಹಬ್ಬಗಳನ್ನು ಆಚರಣೆ ಮಾಡಲು ಅವಕಾಶ ನೀಡಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.