ಧಾರವಾಡ: ಹುಬ್ಬಳ್ಳಿಯ ಗೋಕುಲ ರಸ್ತೆಯ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣ, ಎಂ.ಟಿ ಮಿಲ್ ಹಾಗೂ ಧಾರವಾಡದ ಗ್ರಾಮೀಣ ಬಸ್ ನಿಲ್ದಾಣ, ರೈಲು ನಿಲ್ದಾಣ, ಹೊಸ ಬಸ್ ನಿಲ್ದಾಣ ಬಳಿ ಆಟೋ ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಅನುಮೋದನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾ ಭವನದಲ್ಲಿ ಸೋಮವಾರ ನಡೆದ ಧಾರವಾಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಲ್ಲಿ ಅನುಮೋದನೆ ನೀಡಿದರು. ಆಟೋ ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಜಾಗ ಗುರುತಿಸಲು ಹುಬ್ಬಳ್ಳಿ– ಧಾರವಾಡ ಡಿಸಿಪಿ ನೇತೃತ್ವದಲ್ಲಿ ಆರ್‌ಟಿಒ, ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಉಪಸಮಿತಿ ರಚಿಸಲಾಗಿದೆ. ಸಮಿತಿಯು ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಮೀಟರ್ ಅಳವಡಿಕೆ, ಪರ್ಮಿಟ್ ನವೀಕರಣ, ದಂಡ ವಿನಾಯಿತಿ ಇತ್ಯಾದಿ ಕುರಿತು ಪರಿಶೀಲಿಸಿ ವರದಿ ನೀಡಲು ಡಿಸಿಪಿ ರವೀಶ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡು ಉಪ ಸಮಿತಿಯನ್ನು ರಚಿಸಲಾಯಿತು.
ಜಿಲ್ಲೆಯಲ್ಲಿ ಪದೇಪದೇ ರಸ್ತೆ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ನಿಗಾ ವಹಿಸಬೇಕು ಎಂದು ದಿವ್ಯಪ್ರಭು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಡಿಸಿಪಿ ರವೀಶ ಸಿ.ಆರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.