ADVERTISEMENT

ಮಹಿಳೆಯ ಗೌರವಕ್ಕೆ ಧಕ್ಕೆ: ಕ್ರಮಕ್ಕೆ ಅರವಿಂದ ಬೆಲ್ಲದ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 7:06 IST
Last Updated 8 ಜನವರಿ 2026, 7:06 IST
<div class="paragraphs"><p>ಅರವಿಂದ ಬೆಲ್ಲದ</p></div>

ಅರವಿಂದ ಬೆಲ್ಲದ

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ‘ನಗರದ ಕೇಶ್ವಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯನ್ನು ಬಂಧಿಸುವ ವೇಳೆ ಹಲ್ಲೆ ನಡೆಸಿರುವುದು ಖಂಡನೀಯ. ರಾಜ್ಯ ಸರ್ಕಾರದ ಒತ್ತಡದಿಂದ ಪೊಲೀಸರು ನಡೆಸಿದ ಈ ಕೃತ್ಯ ಮಹಿಳೆಯ ಮಾನ, ಗೌರವಕ್ಕೆ ಧಕ್ಕೆ ಉಂಟು ಮಾಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.

ADVERTISEMENT

‘ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯರು ನೀಡಿದ ದೂರಿನ ಮೇರೆಗೆ ಮಹಿಳೆ ಮೇಲೆ ಪೊಲೀಸರು ದರ್ಪ ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಎಂಬುದು ಸಾಬೀತುಪಡಿಸಿದ್ದಲ್ಲದೆ, ರಾಜ್ಯ ಸರ್ಕಾರದ ದುರಾಡಳಿತಕ್ಕೆ ಈ ಘಟನೆ ಸಾಕ್ಷಿಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿರುವ ಕಾಂಗ್ರೆಸ್‌ ಸರ್ಕಾರ, ದಬ್ಬಾಳಿಕೆ ನಡೆಸುತ್ತಿದೆ. ತುಘಲಕ್ ಸಾಮ್ರಾಜ್ಯವನ್ನು ಮರುಸ್ಥಾಪಿಸುತ್ತಿದೆ. ಮುಖ್ಯಮಂತ್ರಿ, ಉಪಮಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದರೆ, ಗೃಹ ಸಚಿವರು ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ಅಮಾನುಷ ಘಟನೆಗೆ ಕಾರಣರಾದ ಪೊಲೀಸ್ ಆಯುಕ್ತ, ಸಿಬ್ಬಂದಿ ಮೇಲೆ ಕ್ರಮ ವಹಿಸಿ, ಅವರನ್ನು ಅಮಾನತು ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.