ADVERTISEMENT

ಅರಸೀಕೆರೆ ರೈಲು ನಿಲ್ದಾಣದಲ್ಲಿ ಕಾಮಗಾರಿ: ರೈಲುಗಳ ಸಂಚಾರ ಭಾಗಶಃ ರದ್ದು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 3:14 IST
Last Updated 10 ನವೆಂಬರ್ 2025, 3:14 IST
ರೈಲು
ರೈಲು   

ಹುಬ್ಬಳ್ಳಿ: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್‌ನಲ್ಲಿ ನಡೆಯಲಿರುವ ಪ್ಲಾಟ್‌ಫಾರಂ ಶೆಲ್ಟರ್ ಕಾಮಗಾರಿ ನಿಮಿತ್ತ ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ.

ಡಿಸೆಂಬರ್ 13ರವರೆಗೆ ಎಸ್.ಎಸ್.ಎಸ್ ಹುಬ್ಬಳ್ಳಿ - ಅರಸೀಕೆರೆ ಎಕ್ಸ್‌ಪ್ರೆಸ್ ರೈಲು (16214) ಸಂಚಾರ ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿವೆ.

 ನವೆಂಬರ್ 10 ರಿಂದ ಡಿಸೆಂಬರ್ 14ರವರೆಗೆ ಅರಸೀಕೆರೆ - ಎಸ್.ಎಸ್.ಎಸ್. ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು (16213)  ಸೇವೆಯು ಅರಸೀಕೆರೆ ಮತ್ತು ಬೀರೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆಗೆ ಬದಲು ಬೀರೂರು ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

ADVERTISEMENT

ಅರಸೀಕೆರೆ - ಮೈಸೂರು ಪ್ಯಾಸೆಂಜರ್ ರೈಲು (56267) ಸಂಚಾರ ನವೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಅರಸೀಕೆರೆ ಮತ್ತು ಹಾಸನ ನಡುವೆ ರದ್ದಾಗಲಿದೆ. ಈ  ರೈಲು ಅರಸೀಕೆರೆ ಬದಲು ಹಾಸನದಿಂದ ತನ್ನ ಸಂಚಾರ ಆರಂಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.