
ಧಾರವಾಡ: ‘ವಿಜ್ಞಾನ ಮತ್ತು ತಂತ್ರಜ್ಞಾನದ ಅವಿಷ್ಕಾರ ಮತ್ತು ನವ ಪರಿಕರಗಳನ್ನು ಬಳಸಿಕೊಂಡು ಸೌಹಾರ್ದದ ಬದುಕು ರೂಪಿಸಿಕೊಳ್ಳುವ ಕುರಿತು ಅರಿವು ಮೂಡಿಸುವುದು ಶಿಕ್ಷಣದ ಕಾರ್ಯ. ಶಿಕ್ಷಕರು ತಮ್ಮ ಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು’ ಎಂದು ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಹೇಳಿದರು.
ಸಾಧನಕೇರಿಯಲ್ಲಿ ಭಾನುವಾರ ನಡೆದ ‘ಮೈಂಡ್‌ವೇವ್ ಎಡ್ಯು ಹಬ್’ (ಎಂಇಎಚ್) ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ‘ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಸಮಸ್ಯೆಯನ್ನು ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಬೇಕು’ ಎಂದು ಹೇಳಿದರು.
‘ಮನುಷ್ಯ ಕುತೂಹಲ ಬೆಳೆಸಿಕೊಳ್ಳಬೇಕು. ಕಲಿಕೆ ನಿರಂತರವಾಗಿರಬೇಕು. ಕ್ಷಮತೆ ಮೀರಿ ಕೆಲಸ ಮಾಡುವುದನ್ನು ಕಲಿಯಬೇಕು’ ಎಂದು ಹೇಳಿದರು.
ಪ್ರೊ.ಎಸ್.ಎಂ.ಶಿವಪ್ರಸಾದ್ ಮಾತನಾಡಿ, 21ನೇ ಶತಮಾನದ ಡಿಜಿಟಲ್ ಯುಗದಲ್ಲಿ ಗುಣಮಟ್ಟದ ಸವಾಲು ಪ್ರಮುಖವಾಗಿದೆ. ಶಿಕ್ಷಕರ ಸಾಮರ್ಥ್ಯ ವೃದ್ಧಿ, ಅವರಿಗೆ ಕೌಶಲಗಳನ್ನು ಕಲಿಸುವ, ಹೊಸ ವಿಷಯಗಳು ಮತ್ತು ತಂತ್ರಜ್ಞಾನಗಳನ್ನು ತಿಳಿಸುವ ಉದ್ದೇಶದಿಂದ ಕೇಂದ್ರ ಸ್ಥಾಪಿಸಲಾಗಿದೆ’ ಎಂದರು.
ಎಂಇಎಚ್‌ನ ಸುಭಾಷ್ ಪಾಟೀಲ, ಮಹೇಶ್ ಮಾಶಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.