ADVERTISEMENT

ಗೌರವಧನ ಹೆಚ್ಚಳಕ್ಕೆ ಆಗ್ರಹ: 2ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 4:52 IST
Last Updated 14 ಆಗಸ್ಟ್ 2025, 4:52 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ಮಂಗಳವಾರ ಎಸ್.ಆರ್ ಹಿರೇಮಠ ಬೆಂಬಲ ನೀಡಿದರು 
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ಮಂಗಳವಾರ ಎಸ್.ಆರ್ ಹಿರೇಮಠ ಬೆಂಬಲ ನೀಡಿದರು    

ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ₹ 10 ಸಾವಿರ ಗೌರವಧನವನ್ನು ನೀಡುವುದು ಸಹಿತ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿದ್ದ ಅಹೋರಾತ್ರಿ ಧರಣಿಯು ಮಂಗಳವಾರ (ಎರಡನೇ ದಿನವೂ) ಮುಂದುವರೆಯಿತು.

ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್ ಹಿರೇಮಠ ಆಶಾ ಕಾರ್ಯಕರ್ತೆಯರಿಗೆ ಬೆಂಬಲ ಸೂಚಿಸಿದರು. ಮಳೆ, ಚಳಿಯ ವಾತಾವರಣ ಇದ್ದರೂ ಹೆಚ್ಚಿನ ಉತ್ಸಾಹದಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಎಐಯುಟಿಯುಸಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಪ್ರತಿಭಟನಾಕಾರರನ್ನು ಉದ್ದೇಶಿ ಮಾತನಾಡಿ, ಆಶಾ ಕಾರ್ಯಕರ್ತೆಯರ ಹೋರಾಟವು ರಾಜ್ಯದಾದ್ಯಂತ ಮುಂದುವರೆದಿದೆ. ನಮ್ಮ ಹೋರಾಟದಿಂದಾಗಿ ಸರ್ಕಾರ ಒಂದು ಹೆಜ್ಜೆ ಹಿಂದೆ ಸರಿದಿದೆ. ಆಶಾ ಕಾರ್ಯಕರ್ತರನ್ನು ತೆಗೆಯುವ ನಿರ್ಧಾರ ಕೈ ಬಿಡುತ್ತೇವೆ ಎಂದು ಲಿಖಿತವಾಗಿ ತಿಳಿಸಿದೆ ಎಂದರು.

ADVERTISEMENT

ಸಂಘಟನೆ ಜಿಲ್ಲಾ ಅಧ್ಯಕ್ಷೆ ಭುವನಾ ಬಳ್ಳಾರಿ, ಭಾರತಿ ಶೆಟ್ಟರ್, ಸುಜಾತ ಹಿರೇಮಠ, ಶೈಲಾ ಮಧುಗಲ್, ಮಂಜುಳ ಗಾಡುಗೋಳಿ, ಸಪ್ನಾ ಸುಳ್ಳದ್, ರಾಜೇಶ್ವರಿ ಕೋರಿ, ನಂದಾ ದೊಡ್ಡಮನಿ ಪ್ರತಿಭಟನೆಯಲ್ಲಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.