ADVERTISEMENT

ಗೌರವಧನ ಖಾತರಿಗೆ ಆಶಾ ಕಾರ್ಯಕರ್ತೆಯರ ಆಗ್ರಹ: ಧಾರವಾಡದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 7:05 IST
Last Updated 13 ಜುಲೈ 2020, 7:05 IST
ಗೌರವ ಧನ ಖಾತರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಹುಬ್ಬಳ್ಳಿ ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು
ಗೌರವ ಧನ ಖಾತರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಹುಬ್ಬಳ್ಳಿ ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ₹12 ಸಾವಿರ ಗೌರವಧನ ಖಾತರಿಪಡಿಸುವುದು ಸೇರಿದಂತೆ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಸದಸ್ಯರು ಮಹಾನಗರ ಪಾಲಿಕೆ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಜೀವ ಲೆಕ್ಕಿಸದೆ ಕೊರೊನಾ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರಿಗೆ ಅಗತ್ಯ ಸುರಕ್ಷಾ ಸಾಧನಗಳನ್ನು ನೀಡಬೇಕು. ಕರ್ತವ್ಯದ ಸಂದರ್ಭದಲ್ಲಿ ಕೋವಿಡ್‌ಗೆ ತುತ್ತಾದರೆ ಪರಿಹಾರದ ಜತೆಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬೇಡಿಕೆ ಈಡೇರಿಸುವಂತೆ ಇದುವರೆಗೆ ಸರ್ಕಾರಕ್ಕೆ ಹತ್ತಾರು ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ, ಇದುವರೆಗೆ ಸ್ಪಂದಿಸಿಲ್ಲ. ಅನಿವಾರ್ಯವಾಗಿ ಜುಲೈ 10ರಿಂದ ಸೇವೆಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟವನ್ನು ಹಮ್ಮಿಕೊಂಡಿದ್ದೇವೆ ಎಂದರು.

ADVERTISEMENT

ಬಳಿಕ, ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.