ADVERTISEMENT

ಹುಬ್ಬಳ್ಳಿ: ಪಕ್ಕದ ಮನೆಯ ವ್ಯಕ್ತಿಯಿಂದ ಸಂಚಾರ ಪೊಲೀಸ್ ಠಾಣೆ ಎಎಸ್ಐ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 7:57 IST
Last Updated 21 ಫೆಬ್ರುವರಿ 2022, 7:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹುಬ್ಬಳ್ಳಿ: ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಪುರಾಣಿಕಮಠ ಅವರ ಮೇಲೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಹಳೇ ಹುಬ್ಬಳ್ಳಿಯ ಸಹದೇವ ನಗರದಲ್ಲಿ ಸೋಮವಾರ ನಡೆದಿದೆ.

ಪಕ್ಕದ ಮನೆಯ ಭರತೇಶ ಹಲ್ಲೆ ನಡೆಸಿದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕಾಗಿ ಬೆಳಿಗ್ಗೆ ಪುರಾಣಿಕಮಠ ಅವರೊಂದಿಗೆ ಜಗಳ ತೆಗೆದ ಭರತೇಶ ಇಟ್ಟಿಗೆಯಿಂದ ತಲೆಗೆ ಹೊಡೆದಿದ್ದಾನೆ. ತಲೆಯಿಂದ ತೀವ್ರ ರಕ್ತಸ್ರಾವವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT