ADVERTISEMENT

ಹುಬ್ಬಳ್ಳಿ: ಅತ್ಯಾಚಾರಕ್ಕೆ ಯತ್ನ; ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 9:49 IST
Last Updated 2 ನವೆಂಬರ್ 2022, 9:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಮನೆಯಿಂದ ಉದ್ಯೋಗಕ್ಕೆ ತೆರಳುತ್ತಿದ್ದ 36 ವರ್ಷದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಇಲ್ಲಿನ ಕಸಬಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಂಗಳವಾರ ಪ್ರಕರಣ ದಾಖಲಾಗಿತ್ತು.

ಸ್ಥಳೀಯ ನಿವಾಸಿಗಳಾದ ಉಲ್ಪಥ್‌ ನಾಮ್‌, ಮಲಿಕ್‌ ಮತ್ತು ಮುಬಾರಕ್‌ ಬಂಧಿತ ಆರೋಪಿಗಳು. ಹಳೇಹುಬ್ಬಳ್ಳಿ ಇಂದಿರಾನಗರದ ಮಹಿಳೆ, ಮಂಗಳವಾರ ಮಧ್ಯಾಹ್ನ ಉದ್ಯಮ ನಗರದಲ್ಲಿರುವ ಫ್ಯಾಕ್ಟರಿ ಕೆಲಸಕ್ಕೆ ತೆರಳುತ್ತಿದ್ದಾಗ ಮೂವರು ಹಿಂಬಾಲಿಸಿಕೊಂಡು ಬಂದಿದ್ದರು. ಅವರಲ್ಲಿ ಒಬ್ಬನು ಬಲವಂತವಾಗಿ ಅವರ ಬಾಯಿ ಮುಚ್ಚಿ, ಬಯಲು ಜಾಗಕ್ಕೆ ಎಳೆದೊಯ್ದಿದ್ದ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಗಳು ಹಲ್ಲೆ ನಡೆಸಿ, ತಾವು ಹೇಳಿದಂತೆ ಕೇಳಬೇಕು ಎಂದು ಚಾಕು ತೋರಿಸಿ ಬೆದರಿಸಿದ್ದರು. ಮಹಿಳೆಯ ಚೀರಾಟದ ಸದ್ದು ಕೇಳಿ ಫ್ಯಾಕ್ಟರಿ ಕೆಲಸಗಾರರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು. ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT