ಹುಬ್ಬಳ್ಳಿ: ವಿವಿಧ ಪ್ರಕಾರದ ನೃತ್ಯಕಲೆಗಳಿಂದ ಉತ್ತಮ ರೀತಿಯಲ್ಲಿ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ನೃತ್ಯ ತಜ್ಞೆ ದೀಪ್ತಿ ಹಸಬಿ ತಿಳಿಸಿದರು.
‘ನೃತ್ಯ ಚಿಕಿತ್ಸೆ’ ಕುರಿತು ಇಲ್ಲಿನ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೆ. ವಿಜ್ಞಾನ ಸಂಸ್ಥೆಯ ಮನಶಾಸ್ತ್ರ ವಿಭಾಗ ವಿಭಾಗ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
‘ನೃತ್ಯ ಕಲಿಕೆಯು ಆರೋಗ್ಯ ರಕ್ಷಣೆಗೆ ಪೂರಕವಾಗುತ್ತದೆ. ಇದರಲ್ಲಿ ಚಿಕಿತ್ಸಾ ಗುಣಗಳಿದ್ದು, ಅವುಗಳನ್ನು ತಿಳಿಪಡಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು’ ಎಂದರು.
ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ ಜೆ. ಹಾನಗಲ್, ಮನಶಾಸ್ತ್ರ ಸಂಘದ ಅಧ್ಯಕ್ಷೆ ಮೈಥಿಲಿ ನರಗುಂದ, ಪ್ರಾಚಾರ್ಯರಾದ ಸುಮಂಗಲಾ ಬಿ. ಪಾಟೀಲ, ಪಿಯುಸಿ ಕಾಲೇಜಿನ ಪ್ರಾಚಾರ್ಯರಾದ ನಿರ್ಮಲಾ ಅಣ್ಣಿಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.