ADVERTISEMENT

‘ಮಾನವ ಹಕ್ಕುಗಳ ಅರಿವು ಅವಶ್ಯ’

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 2:59 IST
Last Updated 29 ಡಿಸೆಂಬರ್ 2022, 2:59 IST
ನವಲಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು -ನೆರವು ಕಾರ್ಯಕ್ರಮವನ್ನು ದಿವಾಣಿ ನ್ಯಾಯಾಧೀಶ ಸಂತೋಷ್ ಎಂ.ಎಸ್., ಉದ್ಘಾಟಿಸಿದರು
ನವಲಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು -ನೆರವು ಕಾರ್ಯಕ್ರಮವನ್ನು ದಿವಾಣಿ ನ್ಯಾಯಾಧೀಶ ಸಂತೋಷ್ ಎಂ.ಎಸ್., ಉದ್ಘಾಟಿಸಿದರು   

ನವಲಗುಂದ: ‘ಮಹಿಳಾ ರಕ್ಷಣೆಯ ಕಾನೂನು ಹಾಗೂ ಮಾನವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಅವಶ್ಯ’ ಎಂದು ದಿವಾಣಿ ನ್ಯಾಯಾಧೀಶ ಸಂತೋಷ್ ಎಂ.ಎಸ್., ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ಎಂಜಿನಿಯರಿಂಗ್‌ ಇಲಾಖೆ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಹಂತದಲ್ಲೇ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ADVERTISEMENT

ವಕೀಲರಾದ ಕುಮಾರಿ ಕೆ.ಸಿ.ಪಾಟೀಲ ಹಾಗೂ ಸಿ.ಎಂ.ಪಾಟೀಲ ಅವರು ಮಹಿಳೆಯರ ರಕ್ಷಣೆಗೆ ಇರುವ ಕಾನೂನು ಮತ್ತು ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಬಿ. ಬಾಗಡಿ ಅಧ್ಯಕ್ಷತೆ ವಹಿಸಿದ್ದರು. ಆನಂದ ಹ. ಮುರಾಳ, ವಿನಾಯಕ ಮಿರಜಕರ, ಸವಿತಾ ಚಿಕ್ಕಣ್ಣವರ, ಆಶಾ ಎನ್.ಆರ್, ಮಾನಸಾ ಎಚ್‌., ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.