ADVERTISEMENT

ಅಯೋಧ್ಯೆಯಲ್ಲಿ ರಾಮಮಂದಿರ, ಮಸೀದಿ ನಿರ್ಮಾಣಕ್ಕೆ ವಿರೋಧವಿಲ್ಲ: ಪೇಜಾವರ ಶ್ರೀ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2019, 13:26 IST
Last Updated 18 ಮಾರ್ಚ್ 2019, 13:26 IST
   

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಮಸೀದಿ ಎರಡೂ ನಿರ್ಮಾಣವಾಗಲಿ. ಇದಕ್ಕೆ ವಿರೋಧವಿಲ್ಲ ಎಂದು ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಯೋಧ್ಯೆ ವಿಚಾರವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಈ ಬಾರಿ ಸಫಲವಾಗುವ ಆಶಯ ಇದೆ ಎಂದರು.

ADVERTISEMENT

’ಅಯೋಧ್ಯೆಯಲ್ಲಿ ರಾಮಮಂದಿರ, ಮಸೀದಿ ಅಕ್ಕಪಕ್ಕದಲ್ಲಿ ನಿರ್ಮಾಣ ಬೇಡ, ಸ್ವಲ್ಪ ದೂರ, ದೂರದಲ್ಲಿ ನಿರ್ಮಾಣವಾಗಲಿ’ ಎಂದು ಅವರು ಸಲಹೆ ನೀಡಿದರು. ಯಾವುದೇ ಸಂಘರ್ಷ ಇಲ್ಲದೆ ವಿವಾದ ಬಗೆ ಹರಿಯಲಿ ಎಂದು ಆಶಯ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.