ADVERTISEMENT

ಬಾಬಾಸಾಹೇಬ್ ಕಲ್ಯಾಣಿಗೆ ಗೌರವ ಡಾಕ್ಟರೇಟ್‌

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 17:08 IST
Last Updated 30 ಏಪ್ರಿಲ್ 2022, 17:08 IST
ಬಾಬಾಸಾಹೇಬ್ ಕಲ್ಯಾಣಿ
ಬಾಬಾಸಾಹೇಬ್ ಕಲ್ಯಾಣಿ   

ಹುಬ್ಬಳ್ಳಿ:ಇಲ್ಲಿನ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯವು ಭಾರತ ಫೋರ್ಜ್‌ ಲಿಮಿಟೆಡ್‌ ಅಧ್ಯಕ್ಷ ಬಾಬಾಸಾಹೇಬ್‌ ಕಲ್ಯಾಣಿ ಅವರಿಗೆ ಗೌರವ ಡಾಕ್ಟರೇಟ್‌ ಘೋಷಿಸಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ವಿ. ಕುಲಪತಿ ಡಾ.ಅಶೋಕ್‌ ಶೆಟ್ಟರ್, ಮೊದಲ ಬಾರಿಗೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ. ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗಾಗಿ ನೀಡಲಾಗುತ್ತಿದ್ದು, ಮೇ 1ರಂದು ಪ್ರದಾನ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT