ADVERTISEMENT

ಯುಗಾದಿ, ಈದ್ ಉಲ್ ಫಿತ್ರ್:ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2025, 14:22 IST
Last Updated 24 ಮಾರ್ಚ್ 2025, 14:22 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮೆಟಾ ಎಐ

ಹುಬ್ಬಳ್ಳಿ: ಯುಗಾದಿ ಮತ್ತು ಈದ್ ಉಲ್ ಫಿತ್ರ್‌  ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ.

ADVERTISEMENT

ಎಸ್ಎಂವಿಟಿ ಬೆಂಗಳೂರು- ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು (06511– 06513) ಮಾರ್ಚ್ 28 ಮತ್ತು ಮಾರ್ಚ್ 30ರಂದು ಸಂಜೆ 7 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಇದೇ ರೈಲು (06512– 06514) ಮಾರ್ಚ್ 29ರಂದು ಸಂಜೆ 5 ಗಂಟೆಗೆ, ಮಾರ್ಚ್ 31ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 4.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ವಿಶೇಷ ರೈಲುಗಳು ಎರಡೂ ಮಾರ್ಗದಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.