ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರು ಮತ್ತು ಕಾರವಾರ ನಡುವೆ ಜುಲೈ 26 ಮತ್ತು 28ರಂದು ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಎರಡೂ ದಿನ ಮಧ್ಯರಾತ್ರಿ 12.30ಕ್ಕೆ ಹೊರಡುವ ವಿಶೇಷ ರೈಲು (06567) ಮರುದಿನ ಸಂಜೆ 4ಕ್ಕೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು ಅವತ್ತೇ ರಾತ್ರಿ 11.30ಕ್ಕೆ ಕಾರವಾರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 3.30ಕ್ಕೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ.
ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ಈ ವಿಶೇಷ ರೈಲು ನಿಲುಗಡೆ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.