ಹುಬ್ಬಳ್ಳಿ: ರಾತ್ರಿ ಕರ್ಫ್ಯೂ ಸಮಯ ಬದಲಾವಣೆ ಮಾಡಿರುವುದು ಸರಿಯಲ್ಲ. ಒಮ್ಮೆ ತೆಗೆದುಕೊಂಡ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿರ್ಧಾರ ಬದಲಾವಣೆಯಿಂದ ಸಂಶಯ ಬರುತ್ತದೆ. ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು’ ಎಂದರು.
ಒಂದು ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಇಂತದ್ದಕ್ಕೆ ಅವಕಾಶವಿಲ್ಲದಂತಹ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಶಾಲೆಗಳನ್ನು ಆರಂಭಿಸಬೇಕು. ಕೊರೊನಾ ಹೆಚ್ಚಾದರೆ ಮುಂದೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.