ADVERTISEMENT

ಸಭಾಪತಿ ಹುದ್ದೆಗೆ ನಾನೇ ಬಿಜೆಪಿ ಅಭ್ಯರ್ಥಿ: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2022, 18:34 IST
Last Updated 17 ಡಿಸೆಂಬರ್ 2022, 18:34 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ    

ಧಾರವಾಡ: ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನನ್ನನ್ನು ಬಿಜೆಪಿಯ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ರವಿಕುಮಾರ ಅವರು ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ಶನಿವಾರ ಅಧಿಕೃತ ಘೋಷಣೆ ಹೊರಬೀಳಲಿದೆ’ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ ಪ್ರತಿಭಟನೆ ಮಾಡುವುದು ಬೇಡ. ಅಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ವಿನಾಕಾರಣ ಪ್ರತಿಭಟನೆಯಿಂದ ಚರ್ಚೆಗಳು ನಡೆಯಲ್ಲ’ ಎಂದರು.

‘ನಮ್ಮದು ಸಮಗ್ರ ಕರ್ನಾಟಕ, ಅದರಲ್ಲಿ ಎರಡು ಮಾತಿಲ್ಲ. ಆದರೆ, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಸರ್ಕಾರ, ಸದಸ್ಯರು ಮುಂದಾಗಬೇಕು. ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.