ಧಾರವಾಡ: ಕರ್ನಾಟಕ ರಾಜ್ಯ ಮತ್ತು ಧಾರವಾಡ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರೋವರ್ಸ್ ಬಾಸ್ಕೆಟ್ ಬಾಲ್ ಕ್ಲಬ್ ವತಿಯಿಂದ ಫೆಬ್ರುವರಿ 8ರಿಂದ 11ರವರೆಗೆ ರಾಜ್ಯಮಟ್ಟದ ಬಾಸ್ಕೆಟ್ ಬಾಲ್ ಹೊನಲು ಬೆಳಕಿನ ಟೂರ್ನಿ ಏರ್ಪಡಿಸಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋವರ್ಸ್ ಬಾಸ್ಕೆಟ್ ಬಾಲ್ ಕ್ಲಬ್ ಪೋಷಕ ಮಹೇಶ ಶೆಟ್ಟಿ, ಲೀಗ್ ಕಂ ನಾಕೌಟ್ ಮಾದರಿಯಲ್ಲಿ ಟೂರ್ನಿ ಜರುಗಲಿದೆ. ಇಲ್ಲಿನ ರೋವರ್ಸ್ ಮತ್ತು ಎಂವಿಎಎಸ್ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ. ವಿವಿಧ ಜಿಲ್ಲೆಗಳ 24 ಪುರುಷ ಹಾಗೂ 8 ಮಹಿಳಾ ತಂಡಗಳು ನೋಂದಾಯಿಸಿಕೊಂಡಿವೆ ಎಂದು ಹೇಳಿದರು.
ಪುರುಷ ವಿಭಾಗದಲ್ಲಿ ವಿಜೇತ ತಂಡಕ್ಕೆ ₹ 50 ಸಾವಿರ ನಗದು, ರನ್ನರ್ ಅಪ್ ತಂಡಕ್ಕೆ ₹ 35 ಸಾವಿರ ನಗದು ಬಹುಮಾನ ನೀಡಲಾಗುವುದು. ಮಹಿಳಾ ವಿಭಾಗದಲ್ಲಿ ವಿಜೇತ ತಂಡಕ್ಕೆ ₹ 40 ಸಾವಿರ ನಗದು, ರನ್ನರ್ ಅಪ್ ತಂಡಕ್ಕೆ ₹ 25 ಸಾವಿರ ನಗದು ಬಹುಮಾನ ನೀಡಲಾಗುವುದು. ಟೂರ್ನಿ ಅತ್ಯುತ್ತಮ ಆಟಗಾರ, ಆಟಗಾರ್ತಿಗೆ ತಲಾ ₹ 5 ಸಾವಿರ ನಗದು ಬಹುಮಾನ ಹಾಗೂ ಪ್ರತಿ ಪಂದ್ಯದ ಅತ್ಯುತ್ತಮ ಆಟಗಾರ, ಆಟಗಾರ್ತಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.