ವಂದೇ ಭಾರತ್ ಎಕ್ಸ್‌ಪ್ರೆಸ್
ಹುಬ್ಬಳ್ಳಿ: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣ ಮತ್ತು ಬೆಳಗಾವಿ ನಡುವೆ ಸಂಚರಿಸುವ ವಂದೇ ಭಾರತ್ ರೈಲುಗಳ (26752/26751) ಅರೆ ವೇಗದ ಸೇವೆಯು ಬುಧವಾರ ಹೊರತುಪಡಿಸಿ, ವಾರದ ಆರು ದಿನಗಳು ಇರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬಳಿಕ, ವಿಶೇಷ ರೈಲು (06575) ಬೆಂಗಳೂರಿನಿಂದ 11.15ಕ್ಕೆ ಹೊರಟು, ಯಶವಂತಪುರ, ತುಮಕೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಧಾರವಾಡ ನಿಲ್ದಾಣಗಳಲ್ಲಿ ನಿಲುಗಡೆಯಾಗಿ, ರಾತ್ರಿ 8 ಗಂಟೆಗೆ ಬೆಳಗಾವಿ ತಲುಪಲಿದೆ.
ರೈಲುಗಳ ನಿಯಮಿತ ಸಂಚಾರ ಆ.11ರಿಂದ ಪ್ರಾರಂಭವಾಗಲಿದೆ. ಬೆಳಗಾವಿ–ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (26751) ರೈಲು ಬೆಳಗಾವಿಯಿಂದ ಬೆಳಿಗ್ಗೆ 5.20ಕ್ಕೆ ಹೊರಟು, ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪಲಿದೆ. ಧಾರವಾಡ (ಬೆಳಿಗ್ಗೆ 7.08/7:10), ಎಸ್ಎಸ್ಎಸ್ ಹುಬ್ಬಳ್ಳಿ (7.30/7.35), ಎಸ್ಎಂಎಂ ಹಾವೇರಿ (8.35/8.37), ದಾವಣಗೆರೆ (9.25/9.27), ತುಮಕೂರು (ಮಧ್ಯಾಹ್ನ 12.15/12.17) ಯಶವಂತಪುರ (1.03/1.05) ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣದಿಂದ ಮಧ್ಯಾಹ್ನ 2.20ಕ್ಕೆ ಹೊರಡುವ ರೈಲು (26752), ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ. ಯಶವಂತಪುರ (ಮಧ್ಯಾಹ್ನ 2.28/2.30), ತುಮಕೂರು (3.03/3.05), ದಾವಣಗೆರೆ (5.48/5.50), ಎಸ್ಎಂಎಂ ಹಾವೇರಿ (6.48/6.50), ಎಸ್ಎಸ್ಎಸ್ ಹುಬ್ಬಳ್ಳಿ (ರಾತ್ರಿ 8/8.05) ಮತ್ತು ಧಾರವಾಡ (8.25/8.27) ನಿಲ್ದಾಣಗಳಲ್ಲಿ ನಿಲುಗಡೆ ಆಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.