
ಪ್ರಜಾವಾಣಿ ವಾರ್ತೆ
ಬೆಳಗಾವಿ ಸುವರ್ಣ ವಿಧಾನಸೌಧ
ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ನವಲಗುಂದ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಯಬೇಕು ಎಂದು ಬಿಜೆಪಿ ಮುಖಂಡ ದೇವರಾಜ ದಾಡಿಭಾವಿ ಒತ್ತಾಯಿಸಿದ್ದಾರೆ.
ಈ ಭಾಗದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಬೇಕು. ಕಳಸಾ –ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನ, ಅತಿವೃಷ್ಟಿ, ಅನಾವೃಷ್ಟಿಯಿಂದ ತತ್ತರಿಸಿದ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಈ ಭಾಗದ ಶಾಸಕರು, ಸಚಿವರು ಇಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡಬೇಕು. ಚರ್ಚೆಯಾದ ವಿಷಯಗಳು ಕಾರ್ಯರೂಪಕ್ಕೆ ಬರಬೇಕು. ಆಗ ಮಾತ್ರ ಇಲ್ಲಿ ಅಧಿವೇಶನ ನಡೆಸಿದ್ದು ಸಾರ್ಥಕವಾಗುತ್ತದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.