ADVERTISEMENT

ಭಾರತ್ ಬಂದ್: ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 5:21 IST
Last Updated 27 ಸೆಪ್ಟೆಂಬರ್ 2021, 5:21 IST
ಪ್ರತಿಭಟನಾಕಾರರು ಬಸ್ ತಡೆದು ಪ್ರತಿಭಟಿಸಿದರು
ಪ್ರತಿಭಟನಾಕಾರರು ಬಸ್ ತಡೆದು ಪ್ರತಿಭಟಿಸಿದರು   

ಧಾರವಾಡ: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಯಶಸ್ವಿಗೊಳಿಸಲು ವವಿಧ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ನಗರದ ಜ್ಯುಬಿಲಿ ವೃತ್ತದಲ್ಲಿ ಬಸ್ ಸಂಚಾರ ತಡೆಗೆ ಪ್ರತಿಭಟನಾಕಾರರು ಮುಂದಾದರು. ಬಸ್‌ಗಳಿಗೆ ಹೋರಾಟಗಾರರು ಅಡ್ಡವಾಗಿ ಮಲಗಿ ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾದ ಪೊಲೀಸರೊಂದಿಗೆ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಹೋರಾಟಗಾರರ ನಡುವೆ ವಾಗ್ವಾದ ನಡೆಯಿತು. ಕೊನೆಗೂ ಪಟ್ಟು ಬಿಡದ ಹೋರಾಟಗಾರರು ಜ್ಯುಬಿಲಿ ವೃತ್ತವನ್ನು ಬಂದ್ ಮಾಡಿದರು.
ಉಳಿದಂತೆ ಬಂದ್‌ ಹಿನ್ನೆಲೆಯಲ್ಲಿ ಹಲವು ಅಂಗಡಿಗಳು ಬಾಗಿಲು ಹಾಕಿವೆ. ಬಡಾವಣೆಗಳಲ್ಲಿ ಅಂಗಡಿಮುಗ್ಗಟ್ಟುಗಳು ತೆರೆದಿವೆ. ಎಡಪಕ್ಷಗಳ ವಿವಿಧ ಸಂಘಟನೆಗಳು, ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.