ADVERTISEMENT

ಬಿಹಾರದಲ್ಲಿ ಮತ ಲೂಟಿ; ಸಲೀಂ ಅಹ್ಮದ್‌

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 4:51 IST
Last Updated 20 ನವೆಂಬರ್ 2025, 4:51 IST
ಸಲೀಂ ಅಹ್ಮದ್
ಸಲೀಂ ಅಹ್ಮದ್   

ಹುಬ್ಬಳ್ಳಿ: ‘ಬಿಹಾರದಲ್ಲಿ ಮತ ಕಳವು ಅಷ್ಟೇ ನಡೆದಿಲ್ಲ, ಮತ ಲೂಟಿ ಆಗಿದೆ. ಚುನಾವಣಾ ಆಯೋಗವು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಪಿಮುಷ್ಠಿಯಲ್ಲಿ ಇದೆ’ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್ ಆರೋಪಿಸಿದರು.

ಇಲ್ಲಿ ಬುಧವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರಿಸುತ್ತೇವೆ’ ಎಂದರು.

ಸಚಿವ ಸಂತೋಷ್‌ ಲಾಡ್ ಮಾತನಾಡಿ, ‘ದೇಶದ ಪ್ರಧಾನಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಮೋಸದಿಂದ ಚುನಾವಣೆ ಗೆಲ್ಲಲು ಮುಂದಾದರೆ ಏನು ಮಾಡಲು ಸಾಧ್ಯ? ಪ್ರಧಾನಿ ಅವರಿಗೆ ಮೋಸ ಮಾಡುವುದರಲ್ಲಿ ‘ವಿಶ್ವಗುರು’  ಪಟ್ಟ ನೀಡಬೇಕು’ ಎಂದರು.

ADVERTISEMENT

‘ಹೆಚ್ಚು ಸ್ಥಾನಗಳಿಗೆ ಸ್ಪರ್ಧಿಸಿದರೆ, ಮತ ಗಳಿಕೆ ಪ್ರಮಾಣ ಹೆಚ್ಚಾಗಬೇಕು. ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದರೂ ಮತಗಳಿಕೆ ಪ್ರಮಾಣ ಹೆಚ್ಚಾಗಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.