ಅಣ್ಣಿಗೇರಿ: ಪಟ್ಟಣದ ಬಂಗಾರಪ್ಪ ಬಡಾವಣೆ ಹತ್ತಿರದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಬೈಕ್-ಕಾರು ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸ್ಥಳೀಯ ಬಂಗಾರಪ್ಪ ಬಡಾವಣೆಯ ನಿವಾಸಿ ಆನಂದ ಪ್ರಭುಗೌಡ ಮರಿಗೌಡ್ರು (25) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಸಿದ್ಧಾರೂಢ ಆಲದಕಟ್ಟಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.