ಪ್ರಲ್ಹಾದ ಜೋಶಿ
ಧಾರವಾಡ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭವಾಗಲಿದೆ‘ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಲ್ಲಿ ಭಾನುವಾರ ತಿಳಿಸಿದರು.
ತಾಲ್ಲೂಕಿನ ಹೆಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲರ ಜೊತೆ ಚರ್ಚಿಸಿ, ಚುನಾವಣೆ ಪ್ರಕ್ರಿಯೆ ನಡೆಸುತ್ತಾರೆ’ ಎಂದರು.
‘ಬಿ.ವೈ.ವಿಜಯೇಂದ್ರ ಅವರನ್ನೇ ಅಧ್ಯಕ್ಷರಾಗಿ ಮಾಡಬೇಕು ಎಂದು ಒಂದು ಗುಂಪಿನ ಒತ್ತಾಯ ಇದೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ವಿಜಯೇಂದ್ರ ಹಾಗೂ ಸೋಮಣ್ಣ ನಾನೇ ಅಧ್ಯಕ್ಷ ಆಗಬೇಕು ಎಂದು ಹೇಳಿಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.