ADVERTISEMENT

15 ಸ್ಥಾನಗಳನ್ನೂ ಗೆಲ್ಲುತ್ತೇವೆ: ಕಟೀಲ್

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2019, 14:03 IST
Last Updated 18 ನವೆಂಬರ್ 2019, 14:03 IST

ಹುಬ್ಬಳ್ಳಿ: ‘ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಹದಿನೈದು ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಹಾಗಾಗಿ, ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಜಯದ ನಗೆ ಬೀರಲಿದ್ದಾರೆ’ ಎಂದರು.

‘ಬಿಜೆಪಿ 8ಕ್ಕಿಂತ ಕಡಿಮೆ ಸ್ಥಾನ ಪಡೆಯದಿದ್ದರೆ, ಸರ್ಕಾರ ಬೀಳುತ್ತದೆಯಲ್ಲಾ...?’ ಎಂಬ ಪ್ರಶ್ನೆಗೆ, ‘ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದ ಮೇಲೆ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಬೀಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.