ADVERTISEMENT

ಬಿಜೆಪಿ ಸಂಘಟನೆಗೆ ಶ್ರಮಿಸಿ: ಜಿ.ವಿ ರಾಜೇಶ ಕರೆ

ಕಾರ್ಯಕರ್ತರಿಗೆ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 16:14 IST
Last Updated 11 ಆಗಸ್ಟ್ 2022, 16:14 IST
ಹುಬ್ಬಳ್ಳಿಯ ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ಗುರುವಾರ ನಡೆದ ಧಾರವಾಡ ವಿಭಾಗೀಯ ಸಭೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ ಮಾತನಾಡಿದರು
ಹುಬ್ಬಳ್ಳಿಯ ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ಗುರುವಾರ ನಡೆದ ಧಾರವಾಡ ವಿಭಾಗೀಯ ಸಭೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ ಮಾತನಾಡಿದರು   

ಹುಬ್ಬಳ್ಳಿ: ‘ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಂಘಟನಾತ್ಮಕವಾಗಿ ಶ್ರಮಿಸಬೇಕು’ ಎಂದು ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ ಕರೆ ನೀಡಿದರು.

ನಗರದಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ಗುರುವಾರ ನಡೆದ ಧಾರವಾಡ ವಿಭಾಗೀಯ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದೆ. ಆದರೆ, ವಿರೋಧ ಪಕ್ಷಗಳು ಆಧಾರರಹಿತ ಆರೋಪ ಮಾಡುತ್ತಿವೆ. ಕಾರ್ಯಕರ್ತರನ್ನೂ ಮುಖ್ಯವಾಹಿನಿಗೆ ತರುವ ಪಕ್ಷವೆಂದರೆ ಅದು ಬಿಜೆಪಿ ಮಾತ್ರ’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿಭಾಗೀಯ ಪ್ರಭಾರಿ ಲಿಂಗರಾಜ ಪಾಟೀಲ, ‘ರಾಜ್ಯ ಸರ್ಕಾರದಿಂದ ಸಾಕಷ್ಟು ಕಾರ್ಯಕ್ರಮಗಳು ಜಾರಿಯಾಗುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಬೇಕು’ ಎಂದು ಹೇಳಿದರು.

ADVERTISEMENT

ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಭಾಗದ ಸಹ ಪ್ರಭಾರಿ ನಾರಾಯಣ ಜರತಾರಘರ, ಹು- ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ, ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ವಕ್ತಾರ ರವಿ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.