ಹುಬ್ಬಳ್ಳಿ: ಕಪ್ಪು ಶಿಲೀಂದ್ರ ಸೋಂಕಿತ ರೋಗಿಗಳಿಗೆ ನೀಡಲಾಗುವ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮಾರುಕಟ್ಟೆಯಲ್ಲಿ ₹3,400 ಇದ್ದ ಇಂಜೆಕ್ಷನ್ ಅನ್ನು ₹20 ಸಾವಿರದಿಂದ ₹25 ಸಾವಿರದ ತನಕ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿರುವ ಪೈ ಹೋಟೆಲ್ ಸಮೀಪ ಇಂಜೆಕ್ಷನ್ ಖರೀದಿ ಮಾಡುವ ನೆಪದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಮಾರಾಟದ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.