ADVERTISEMENT

ಹೈಕೋರ್ಟ್ ಧಾರವಾಡ ಪೀಠಕ್ಕೆ ಬಾಂಬ್ ಬೆದರಿಕೆ: ಇ–ಮೇಲ್‌ನಲ್ಲಿ ಸಂದೇಶ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 10:07 IST
Last Updated 6 ಜನವರಿ 2026, 10:07 IST
   

ಧಾರವಾಡ: ಹೈಕೋರ್ಟ್ ಧಾರವಾಡ ಪೀಠಕ್ಕೆ ಬಾಂಬ್ ಬೆದರಿಕೆ ಸಂದೇಶ ಇ-ಮೇಲ್‌ನಲ್ಲಿ ಬಂದಿದೆ. ಪೊಲೀಸರು ತಪಾಸಣೆಯಲ್ಲಿ ತೊಡಗಿದ್ದಾರೆ.

ಹೈಕೋರ್ಟ್ ಕಟ್ಟಡ ಮೂರು ಅಂತಸ್ತುಗಳು, ಮುಂದಿನ ಉದ್ಯಾನ, ಪಕ್ಕದ ಖಾಲಿ ಜಾಗದಲ್ಲಿ ತಪಾಸಣೆ ನಡೆಸಿದ್ದಾರೆ.

'ಹೈಕೋರ್ಟ್ ಪ್ರದೇಶದ ಎಲ್ಲ ಕಡೆ ತಪಾಸಣೆ ನಡೆಸಲಾಗಿದೆ. ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿಲ್ಲ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.