ಧಾರವಾಡ JSS ಕಾಲೇಜು ಕಾಂಪೌಂಡ್‌ಗೆ ಡಿಕ್ಕಿ ಹೊಡೆದ BRTS ಬಸ್: ಎಬಿವಿಪಿ ಪ್ರತಿಭಟನೆ
ಧಾರವಾಡ: ವಿದ್ಯಾಗಿರಿಯ ಜೆಎಸ್‌ಎಸ್ ಕಾಲೇಜು ಕಾಂಪೌಂಡ್ ಗ್ರಿಲ್ ಗೆ ಬಿಆರ್ ಟಿಎಸ್ ಚಿಗರಿ ಬಸ್ ಡಿಕ್ಕಿ ಹೊಡೆದಿದ್ದು, ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯವರು ಎಬಿವಿಪಿ) ಬಿಆರ್ ಟಿಎಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರು ರಸ್ತೆ ತಡೆ ನಡೆಸುತ್ತಿದ್ದಾರೆ. ಬಿ ಆರ್ ಟಿಎಸ್ ಮಾರ್ಗದಲ್ಲಿ ಬಸ್ ಗಳು ಸಾಲುಗಟ್ಟಿ ನಿಂತಿವೆ. ಬಿಆರ್ ಟಿಎಸ್ ವ್ಯವಸ್ಥಾಪಕ ನಿರ್ದೇಶಕರು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಜೆಎಸ್ಎಸ್ ವಿದ್ಯಾಲಯದ ಮುಂದಿನ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಬೇಕು, ರಸ್ತೆ ಮಧ್ಯದ ವಿಭಜಕ ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಸ್ ಗುದ್ದಿದ ರಭಸಕ್ಕೆ ಗೋಡೆ, ಗ್ರಿಲ್ ಹಾನಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.