ಹುಬ್ಬಳ್ಳಿ: ಬಕ್ರೀದ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 6ರಿಂದ ಜೂನ್ 8ರವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 130 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ.
ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಹಾಗೂ ಶಿರಸಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪ್ರಯಾಣಿಸುವ ನಿರೀಕ್ಷೆ ಇದ್ದು, ಹೆಚ್ಚುವರಿ ಬಸ್‌ಗಳಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಅಲ್ಲದೆ, ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ತೆರಳಲು ಸಹ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.