ADVERTISEMENT

ಹುಬ್ಬಳ್ಳಿ: ಇಂದಿನಿಂದ ಬಸ್‌ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 8:34 IST
Last Updated 22 ಜುಲೈ 2020, 8:34 IST

ಹುಬ್ಬಳ್ಳಿ: ಜಿಲ್ಲೆಯಲ್ಲಿ ಲಾಕ್‌ಡೌನ್‌ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ಬಸ್‌ ಸಂಚಾರ ಆರಂಭವಾಗಲಿದೆ.

ಹುಬ್ಬಳ್ಳಿಯ ಹಳೇ ಬಸ್‌ ನಿಲ್ದಾಣ, ಹೊಸೂರು ಬಸ್‌ ನಿಲ್ದಾಣ, ಕಲಘಟಗಿ, ಕುಂದಗೋಳ, ನವಲಗುಂದ, ಅಣ್ಣಿಗೇರಿ ಹಾಗೂ ಮತ್ತಿತರ ಬಸ್‌ ನಿಲ್ದಾಣಗಳಿಂದ ಪ್ರಯಾಣಿಕರ ಬೇಡಿಕೆಗಳ ಅನುಗುಣವಾಗಿ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ ಎಂದು ಹುಬ್ಬಳ್ಳಿ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ರಾಮನಗೌಡ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT