ADVERTISEMENT

ಸಂಪುಟ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್‌ ಸೂಚನೆ: ಶಾಸಕ ಕೋನರೆಡ್ಡಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2025, 12:44 IST
Last Updated 26 ಅಕ್ಟೋಬರ್ 2025, 12:44 IST
<div class="paragraphs"><p>ಶಾಸಕ ಎನ್‌.ಎಚ್‌.ಕೋನರೆಡ್ಡಿ</p></div>

ಶಾಸಕ ಎನ್‌.ಎಚ್‌.ಕೋನರೆಡ್ಡಿ

   

ಧಾರವಾಡ: ‘ಎರಡೂವರೆ ವರ್ಷಕ್ಕೆ ಸಂಪುಟ ವಿಸ್ತರಣೆ ಮಾಡುವಂತೆ ಹೈಕಮಾಂಡ್‌ ಸೂಚನೆ ನೀಡಿರುವುದಾಗಿ ಕಿತ್ತೂರು ಉತ್ಸವದಲ್ಲಿ ಈ ವಿಷಯವನ್ನು ನನಗೆ ತಿಳಿಸಿದರು’ ಎಂದು ಶಾಸಕ ಎನ್‌.ಎಚ್‌.ಕೋನರೆಡ್ಡಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪದೇಪದೇ ಹೇಳುವುದು ಸರಿಯಲ್ಲ. ಶಾಸಕರ ಕೆಲಸದ ವಿವರ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಹೈಕಮಾಂಡ್‌ ಹೇಳಿದೆ. ಸಿ.ಎಂ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರ ಕುರಿತು ಶಾಸಕರು ಏನು ಮಾತನಾಡಬಾರದು ಎಂದು ಹೈಕಮಾಂಡ್‌ ಸೂಚನೆ ನೀಡಿದೆ. ಆ ಸೂಚನೆಗೆ ಬದ್ಧನಾಗಿರುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯಲ್ಲಿ ಬಹಳಷ್ಟು ಸುಧಾರಣೆ ತಂದಿದ್ದಾರೆ. ಈ ಹಿಂದೆ ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ಧಾಗಲೂ ಅವರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಅವರೊಬ್ಬ ಸಮರ್ಥ ನಾಯಕ. ಅಂಥ ಸಚಿವರನ್ನು ಉಳಿಸಿಕೊಂಡು ಉಳಿದವರನ್ನು ಬದಲಾವಣೆ ಮಾಡುವುದು, ಬಿಡುವುದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.