
ಪ್ರಜಾವಾಣಿ ವಾರ್ತೆ
ಸಲೀಂ ಅಹ್ಮದ್
ಹುಬ್ಬಳ್ಳಿ: ‘ಜನವರಿ 15ರ ಬಳಿಕ ಸಚಿವ ಸಂಪುಟದ ಪುನರ್‌ರಚನೆ ಆಗುವ ಸಾಧ್ಯತೆಯಿದ್ದು, ಅದರಲ್ಲಿ ಶೇ 50ರಷ್ಟು ಹೊಸಬರಿಗೆ ಅವಕಾಶ ನೀಡಲು ಪಕ್ಷದ ಹೈಕಮಾಂಡ್‌ಗೆ ಕೋರಲಾಗಿದೆ’ ಎಂದು ವಿಧಾನ ಪರಿಷತ್ತು ಸದಸ್ಯ ಶಾಸಕ ಸಲೀಂ ಅಹ್ಮದ್ ಹೇಳಿದರು.
‘ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಮತ್ತು ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರುವ ದೃಷ್ಟಿಯಿಂದ ಸಚಿವ ಸಂಪುಟ ಪುನರ್‌ರಚನೆ ಮಹತ್ವದಿಂದ ಕೂಡಿದೆ’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಉತ್ತರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ಸಮುದಾಯದ ಶಾಸಕರೊಬ್ಬರು ಸಚಿವರಾಗಬೇಕು ಎಂಬ ಬೇಡಿಕೆ ಇದೆ. ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಇದರ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ತೀರ್ಮಾನಿಸುವರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.