ADVERTISEMENT

ನವಲಗುಂದ: ಸಂಚಾರ ನಿಯಮ ಕಡ್ಡಾಯ ಪಾಲನೆಗೆ ಕರೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2024, 16:26 IST
Last Updated 14 ಜನವರಿ 2024, 16:26 IST
ನವಲಗುಂದದಲ್ಲಿ ಪೊಲೀಸ್ ಇಲಾಖೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಭಾನುವಾರ ರಸ್ತೆ ಸುರಕ್ಷತಾ ಜಾಥಾ ನಡೆಸಲಾಯಿತು
ನವಲಗುಂದದಲ್ಲಿ ಪೊಲೀಸ್ ಇಲಾಖೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಭಾನುವಾರ ರಸ್ತೆ ಸುರಕ್ಷತಾ ಜಾಥಾ ನಡೆಸಲಾಯಿತು   

ನವಲಗುಂದ : ಎಲ್ಲಾ ವಾಹನ ಚಾಲಕರು ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡಬಾರದು. ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸಬೇಕು. ಅತೀ ವೇಗವಾಗಿ ವಾಹನ ಚಾಲನೆ ಮಾಡಬಾರದು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಪಿಎಸ್ಐ ಜನಾರ್ದನ ಭಟ್ರಳ್ಳಿ ಕರೆ ನೀಡಿದರು.

ನಗರದಲ್ಲಿ ಪೊಲೀಸ್‌ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಜಾಥಾದಲ್ಲಿ ಮಾತನಾಡಿದರು.

ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆಯ ಎಡ ಭಾಗದಲ್ಲಿ ಸಂಚರಿಸಬೇಕು. ರಸ್ತೆಗಳನ್ನು ದಾಟುವಾಗ ಅತಿ ಜಾಗರೂಕತೆಯಿಂದ ರಸ್ತೆ ದಾಟಬೇಕು. ಶಾಲಾ ವಾಹನಗಳ ಚಾಲಕರನ್ನು ನೇಮಿಸುವ ಮುನ್ನ ಅವರುಗಳ ಪೂರ್ವಾಪರವನ್ನು ಪರಿಶೀಲಿಸಬೇಕಾಗುತ್ತದೆ ಎಂದರು.

ADVERTISEMENT

ಸಿಪಿಐ ರವಿಕುಮಾರ್ ಕಪ್ಪತ್ತನವರ ಜಾಥಾಗೆ ಚಾಲನೆ ನೀಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ರಸ್ತೆ ಸುರಕ್ಷತಾ ಜಾಥಾ ಜರುಗಿತು. ಜಾಥಾದಲ್ಲಿ ಸಂಚಾರ ಸುರಕ್ಷತಾ ನಿಯಮಗಳ ಪಾಲನೆ ಬಗ್ಗೆ ಘೋಷಣೆಗಳನ್ನು ಕೂಗಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.